ಬ್ರಿಡ್ಜ್ ಗೆ ಕಾರು ಢಿಕ್ಕಿ ➤ನಾಲ್ವರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಕೊಪ್ಪಳ, ಫೆ.17.ಜಿಲ್ಲೆಯ ಕುಕನೂರು ತಾಲೂಕಿನ   ಬನ್ನಿಕೊಪ್ಪದ ಬಳಿ ರಾಷ್ಟೀಯ ಹೆದ್ದಾರಿಯಲ್ಲಿ  ಬ್ರಿಡ್ಜ್ ಗೆ ಕಾರು ವೇಗವಾಗಿ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇವರೆಲ್ಲರೂ ತೆಲಂಗಾಣದವರು ಎಂದು  ಪೊಲೀಸರು ಮಾಹಿತಿ ನೀಡಿದ್ದಾರೆ.

ಜಿಲ್ಲೆಯಿಂದ ಗದಗ ಮಾರ್ಗದಲ್ಲಿ ಹೋಗುವಾಗ ಈ ಘಟನೆ ಸಂಭವಿಸಿದೆ. ಢಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.ಕಾರಿನ ಬಿಡಿಭಾಗವು ರಸ್ತೆ ತುಂಬೆಲ್ಲಾ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು ಎಂದು ವರದಿಯಾಗಿದೆ.

Scroll to Top