ಮೈಸೂರಿನ ಅರಮನೆ ಆವರಣದಲ್ಲಿರುವ ತ್ರಿನೇಶ್ವರನಿಗೆ 11 ಕೆಜಿ ತೂಕದ ಚಿನ್ನದ ಮುಖವಾಡ

(ನ್ಯೂಸ್ ಕಡಬ) newskadaba.com ಮೈಸೂರು, ಫೆ.18.  ನಾಡಿನೆಲ್ಲೆಡೆ ಇಂದು ಮಹಾಶಿವರಾತ್ರಿ ಹಬ್ಬದ ಸಂಭ್ರಮ ಸಡಗರ ಜೋರಾಗಿದೆ. ಅದರಂತೆ ಮೈಸೂರಿನ ಅರಮನೆ ಆವರಣದಲ್ಲಿರುವ ತ್ರಿನೇಶ್ವರ ದೇವಸ್ಥಾನದಲ್ಲಿ ಶಿವನಿಗೆ ವಿಶೇಷ ಅಲಂಕಾರ ಮಾಡಿದ್ದಾರೆ. ಶಿವಲಿಂಗಕ್ಕೆ 11 ಕೆಜಿ ತೂಕದ ಚಿನ್ನದ ಮುಖವಾಡ ಧಾರಣೆ ಮಾಡಿ ಹೂವುಗಳಿಂದ ಅಲಂಕರಿಸಿದ್ದಾರೆ.

ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಜನಿಸಿದ ಹಿನ್ನೆಲೆ ಚಿನ್ನದ ಮುಖವಾಡವನ್ನು ಜಯಚಾಮರಾಜೇಂದ್ರ ಒಡೆಯರ್ ಅವರು ಶಿವನಿಗೆ ಅರ್ಪಿಸಿದ್ದರು. ಪ್ರತಿ ವರ್ಷವೂ ಮಹಾಶಿವರಾತ್ರಿ ದಿನ ಚಿನ್ನದ ಮುಖವಾಡ ಧಾರಣೆ ಮಾಡಲಾಗುತ್ತದೆ. ನಾಳೆಯೂ ದರ್ಶನಕ್ಕೆ ಅವಕಾಶ ನೀಡಲಾಗಿದೆ ಎಂದು ವರದಿಯಾಗಿದೆ.

Also Read  ಕಡಬ: ಗೃಹರಕ್ಷಕ ದಳದ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ

 

 

error: Content is protected !!
Scroll to Top