ಅರಣ್ಯದಲ್ಲಿ ಆಕಸ್ಮಿಕ ಕಾಡ್ಗಿಚ್ಚು ಪ್ರಕರಣ ➤ಗಂಭೀರ ಗಾಯಗೊಂಡ ಸಿಬ್ಬಂದಿಯೋರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಹಾಸನ, ಫೆ.18.  ಸಕಲೇಶಪುರ ತಾಲೂಕಿನ ಪಶ್ಚಿಮ ಘಟ್ಟದ ಕಾಡ್ಗಿಚ್ಚಿಗೆ ಸಿಲುಕಿ ಬೆಂದು ಹೋಗಿದ್ದ ಫಾರೆಸ್ಟ್ ಗಾರ್ಡ್ ಮೃತಪಟ್ಟಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರಾತ್ರಿ ಚಿಕಿತ್ಸೆ ಫಲಿಸದೆ ಫಾರೆಸ್ಟ್ ಗಾರ್ಡ್ ಸುಂದರೇಶ್ ಕೊನೆಯುಸಿರೆಳೆದಿದ್ದಾರೆ. ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಪಶ್ಚಿಮ ಘಟ್ಟದಲ್ಲಿ ಕಾಡುಮನೆ ಎಸ್ಟೇಟ್ ಬಳಿ ಕಾಡ್ಗಿಚ್ಚು ಕಾಣಿಸಿಕೊಂಡಿತ್ತು. ಬೆಂಕಿ ನಂದಿಸಲು ಡಿಆರ್​ಎಫ್​ಒ ಮಂಜುನಾಥ್ ನೇತೃತ್ವದಲ್ಲಿ 6 ಮಂದಿ ಅರಣ್ಯ ಇಲಾಖೆ ಸಿಬ್ಬಂದಿ ಹೋಗಿದ್ದರು.

ಘಟನೆಯಲ್ಲಿ ಅರಣ್ಯ ಅಧಿಕಾರಿ, ಸಿಬ್ಬಂದಿ ಗಂಭೀರ ಗಾಯಗೊಂಡಿದ್ದರು ಸುಂದರೇಶ್ ಹಾಗೂ ಮಂಜುನಾಥ್ ಬೆಂಕಿಯಲ್ಲಿ ಬಹುತೇಕ ಬೆಂದು ಹೋಗಿದ್ದರು. ರಸ್ತೆ ಸಂಪರ್ಕ ಇಲ್ಲದ ಸ್ಥಳದಿಂದ ಅಡ್ಡೆಯಲ್ಲಿ ಹೊತ್ತು ತಂದು ಅರಣ್ಯ ಇಲಾಖೆ ಸಿಬ್ಬಂದಿ, ಪೊಲೀಸ್ ಹಾಗು ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದರು.

Also Read  ಮಾಜಿ ಸೈನಿಕರ ಪಿಂಚಣಿ ಪರಿಷ್ಕರಣೆ

 

error: Content is protected !!
Scroll to Top