ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ     ➤ ಪ್ರಾಂಶುಪಾಲ ವಶಕ್ಕೆ…!!!

(ನ್ಯೂಸ್ ಕಡಬ)newskadaba.com ಹಾಸನ, ಫೆ.18. ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪಿಯು ಕಾಲೇಜು ಪ್ರಭಾರ ಪ್ರಾಂಶುಪಾಲರೊಬ್ಬರನ್ನು ಹಾಸನ ಜಿಲ್ಲೆ ಅರಕಲಗೂಡು ಠಾಣೆ ಪೋಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಪ್ರಾಂಶುಪಾಲ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಿ ಐವರು ವಿದ್ಯಾರ್ಥಿನಿಯರು ಕಾಲೇಜು ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಕೆಲವು ಸಂಘಟನೆಗಳ ಮುಖಂಡರು ವಿದ್ಯಾರ್ಥಿನಿಯರೊಂದಿಗೆ ಚರ್ಚೆ ನಡೆಸಿ ಪೊಲೀಸರು ಮತ್ತು ತಹಶೀಲ್ದಾರ್ ಗೆ ದೂರವಾಣಿ ಮೂಲಕ ಮಾಹಿತಿ ನೀಡಿದ್ದಾರೆ. ಸರ್ಕಲ್ ಇನ್ಸ್ಪೆಕ್ಟರ್ ರಘುಪತಿ ವಿದ್ಯಾರ್ಥಿನಿಯರಿಂದ ಮಾಹಿತಿ ಪಡೆದುಕೊಂಡಿದ್ದಾರೆ.

Also Read  ಕಾರು ಅಪಘಾತ ➤ ದ. ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಪ್ರಾಣಪಾಯದಿಂದ ಪಾರು

error: Content is protected !!
Scroll to Top