ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಬೆಳ್ಳಂಬೆಳಗ್ಗೆ ವಿಷ ಸೇವಿಸಿ ಪ್ರೇಮಿಗಳು ಆತ್ಮಹತ್ಯೆ – News Kadaba

ಬೆಳ್ಳಂಬೆಳಗ್ಗೆ ವಿಷ ಸೇವಿಸಿ ಪ್ರೇಮಿಗಳು ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಯಾದಗಿರಿ, ಫೆ.18. ಯಾದಗಿರಿ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಬೆಳ್ಳಂಬೆಳಗ್ಗೆ ವಿಷ ಸೇವಿಸಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹುರಸಗುಂಡಗಿ ಗ್ರಾಮದಲ್ಲಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು, ವಿಷ ಸೇವಿಸಿ ಸುವರ್ಣ (20) ಹಾಗೂ ಈಶಪ್ಪ (22) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸುವರ್ಣ ಹಾಗೂ ಈಶಪ್ಪ ಕಳೆದ 5-6 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. 2 ವರ್ಷದ ಹಿಂದೆ ಸುವರ್ಣಳನ್ನು ಬೇರೆ ಯುವಕನ ಜೊತೆಗೆ ವಿವಾಹ ಮಾಡಿದ್ದರು. ಬಳಿಕ ತನ್ನ ಪತಿಯೊಂದಿಗೆ ಬೆಂಗಳೂರಿನಲ್ಲಿದ್ದ ಸುವರ್ಣ ನಿನ್ನೆ ಹುರಸಗುಂಡಗಿ ಗ್ರಾಮಕ್ಕೆ ಬಂದಿದ್ದಳು. ವಿಷ ಸೇವಿಸಿ ಸುವರ್ಣ, ಈಶಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭೀರರಾಯನಗುಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Scroll to Top