ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಮುಖ್ಯ ಮಾಹಿತಿ       ➤ ಮಾ.20ರಿಂದ ‘RTE ಸೀಟಿ’ಗಾಗಿ ಅರ್ಜಿ ಸಲ್ಲಿಕೆ ಆರಂಭ…!!!

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.18. 2023-24ನೇ ಸಾಲಿನಲ್ಲಿ ಶಿಕ್ಷಣ ಹಕ್ಕು ಕಾಯ್ದಿಯಡಿ ದಾಖಲಾತಿಗೆ ಮಾರ್ಚ್ 20, 2023ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಪ್ರಾಥಮಿಕ ಶಿಕ್ಷಣ ಇಲಾಖೆಯ ನಿರ್ದೇಶಕರು, 2023-24ನೇ ಸಾಲಿನಲ್ಲಿ ಶಿಕ್ಷಣ ಹಕ್ಕು ಕಾಯಿದೆಯಡಿ ದಾಖಲಾತಿಗಾಗಿ ಅರ್ಜಿಗಳನ್ನು ದಿನಾಂಕ 20-03-2023ರಿಂದ 20-04-2023ರವರೆಗೆ ಸ್ವೀಕರಿಸಲಾಗುವುದು ಎಂದಿದ್ದಾರೆ.

ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ ಹಕ್ಕು ಕಾಯಿದೆ-2009ರ ಅಡಿಯಲ್ಲಿ ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಮಕ್ಕಳಿಗೆ ಪ್ರವೇಶ ಪಡೆಯಲು ಇಚ್ಚಿಸುವ ಪೋಷಕರು ಅರ್ಜಿಯನ್ನು ಸಲ್ಲಿಸಬಹುದು ಎಂದು ತಿಳಿಸಿದ್ದಾರೆ.

Also Read  ಸುಳ್ಯ: ಎಸ್.ವೈ.ಎಸ್ ಮತ್ತು ಎಸ್ಕೆಎಸ್ಸೆಸ್ಸೆಫ್ ಸುಳ್ಯ ನಗರ ಸಮಿತಿ ವತಿಯಿಂದ ಸ್ನೇಹ ಸಮ್ಮಿಲನ ಮತ್ತು ಮೌಲಿದ್ ಮಜ್ಲಿಸ್ ಕಾರ್ಯಕ್ರಮ

 

 

error: Content is protected !!
Scroll to Top