ಕ್ರಿಕೆಟ್ ಪಂದ್ಯಾಟದ ವೇಳೆ ಚೂರಿ ಇರಿತ ➤ ಇಬ್ಬರು ಮೃತ್ಯು

(ನ್ಯೂಸ್ ಕಡಬ)newskadaba.com  ದೊಡ್ಡಬಳ್ಳಾಪುರ, ಫೆ.18. ಕ್ರಿಕೆಟ್ ಪಂದ್ಯಾಟದ ವೇಳೆ ಚೂರಿ ಇರಿತಕ್ಕೆ ಇಬ್ಬರು ಯುವಕರು ಮೃತಪಟ್ಟ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಬೆಳವಂಗಲ ಗ್ರಾಮದಲ್ಲಿ ನಡೆದಿದೆ.

ಮೃತಪಟ್ಟವರನ್ನು ದೊಡ್ಡಬೆಳವಂಗಲ ಗ್ರಾಮದ ನಿವಾಸಿಗಳಾದ ಪಿಯುಸಿ ಪ್ರಥಮ ವರ್ಷದ ವಿದ್ಯಾರ್ಥಿ ಪ್ರತೀಕ್ (17) ಮತ್ತು ಬಿ.ಇ ಪದವೀಧರ ಡಿ.ಎಸ್. ಭರತ್‌ಕುಮಾರ್ (23) ಎಂದು ಗುರುತಿಸಲಾಗಿದೆ.

ದೊಡ್ಡಬಳ್ಳಾಪುರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಧೀರಜ್ ಮುನಿರಾಜು ಅವರು ಕ್ರೀಡಾ ಮತ್ತು ಸಾಂಸ್ಕೃತಿಕ ವೇದಿಕೆ ಮೂಲಕ ಶಿವರಾತ್ರಿ ಅಂಗವಾಗಿ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ಉಂಟಾಗಿ ಈ ದುರ್ಘಟನೆ ನಡೆದಿದೆ.

Also Read  ಲೆಕ್ಕವಿಲ್ಲದಷ್ಟು ಬಂಗಾರವನ್ನು ಕೂಡಿಟ್ಟುಕೊಂಡವರಿಗೆ  ಬಿಗ್ ಶಾಕ್ ➤ ಕೇಂದ್ರದ ಹೊಸ ನಿಯಮ ಜಾರಿ

 

error: Content is protected !!
Scroll to Top