ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ ► ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ.29. ಅಪ್ರಾಪ್ತೆ ಬಾಲಕಿಯೋರ್ವಳ ಮೇಲೆ ಅತ್ಯಾಚಾರವೆಸಿದ ಆರೋಪದಲ್ಲಿ  ಯುವಕನೋರ್ವನನ್ನು ಬಂಧಿಸಿರುವ ಉಪ್ಪಿನಂಗಡಿ ಪೊಲೀಸರು ಆತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಮಚ್ಚಿನ ಕುದ್ರಡ್ಕ ನಿವಾಸಿ ನಾರಾಯಣ (30) ಎಂದು ಗುರುತಿಸಲಾಗಿದೆ. ಈತ ಇಳಂತಿಲದ ಅಪ್ರಾಪ್ತೆ ಬಾಲಕಿಯೋರ್ವಳ ಮೇಲೆ ಕಳೆದ ಆರು ತಿಂಗಳಿನಿಂದ ಅತ್ಯಾಚಾರ ನಡೆಸುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಉಪ್ಪಿನಂಗಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

error: Content is protected !!
Scroll to Top