ಕೋಲಾರ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ➤ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

ನ್ಯೂಸ್ ಕಡಬ) newskadaba.com. ಕೋಲಾರ. ಫೆ.18.  ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದ ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ಕೋಲಾರದ ಪೋಕ್ಸೋ ವಿಶೇಷ ಕೋರ್ಟ್ ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದು, ಸಂತ್ರಸ್ತೆ ಹಾಗೂ ಆಕೆಯ ಕುಟುಂಬಸ್ಥರಿಗೆ ನ್ಯಾಯ ಸಿಕ್ಕಂತಾಗಿದೆ. ಆನಂದ್, ಕಾಂತರಾಜು, ಪ್ರವೀಣ್, ವೇಣು ಜೀವಾವಧಿ ಶಿಕ್ಷೆಗೆ ಒಳಗಾದ ಆರೋಪಿಗಳು.

 

ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಕಾಮಸಮುದ್ರದಲ್ಲಿ 2022ರ ಫೆಬ್ರವರಿ ತಿಂಗಳಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಲಾಗಿತ್ತು. ಸದ್ಯ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ಅವರು ಆದೇಶ ಹೊರಡಿಸಿದ್ದಾರೆ.

Also Read  ಅಬಕಾರಿ ನೀತಿ ಹಗರಣ ಪ್ರಕರಣ..!     ಆಗಸ್ಟ್ 27ರವರೆಗೆ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ವಿಸ್ತರಣೆ..!

 

error: Content is protected !!
Scroll to Top