ಎರಡು ಜೀವಗಳನ್ನು ಬಲಿ ಪಡೆದ ಬೆನ್ನಲ್ಲೇ ಕೃಷಿಕನನ್ನು ಬೆನ್ನಟ್ಟಿದ ಕಾಡಾನೆ

(ನ್ಯೂಸ್ ಕಡಬ) newskadaba.com ಕಡಬ, ಫೆ.21. ಸೋಮವಾರ ಬೆಳಿಗ್ಗೆ ಕಡಬ ತಾಲೂಕಿನ ಮರ್ಧಾಳ ಸಮೀಪದ ನೈಲ ಎಂಬಲ್ಲಿ ಕಾಡಾನೆಯು ಎರಡು ಜೀವಗಳನ್ನು ಬಲಿ ಪಡೆದ ಬೆನ್ನಲ್ಲೇ ಮಂಗಳವಾರ ಬೆಳಗಿನ ಜಾವ ಕಡಬ ತಾಲೂಕಿನ ಕೊಂಬಾರು ಗ್ರಾಮದ ಪೆರುಂದೋಡಿ ಎಂಬಲ್ಲಿ ಕೃಷಿಕರೋರ್ವರನ್ನು ಕಾಡಾನೆಯೊಂದು ಬೆನ್ನಟ್ಟಿದ ಘಟನೆ ಬೆಳಕಿಗೆ ಬಂದಿದೆ.

ಕೊಂಬಾರು ಪರಿಸರದಲ್ಲಿ ಕಾಡಾನೆಯು ಕೃಷಿ ತೋಟಗಳಿಗೆ ಲಗ್ಗೆ ಇಟ್ಟಿದ್ದು, ಅಪಾರ ಕೃಷಿಯನ್ನು ಹಾನಿ ಮಾಡಿದೆ. ಪೆರುಂದೋಡಿ ನಿವಾಸಿ ಮೋಹನ್ ಎಂಬವರು ಮಂಗಳವಾರ ಬೆಳಿಗ್ಗೆ 3.30ರ ಸುಮಾರಿಗೆ ನೀರು ಹಾಯಿಸಲೆಂದು ತನ್ನ ತೋಟಕ್ಕೆ ತೆರಳಿದ್ದ ವೇಳೆ ಕಾಡಾನೆಯೊಂದು ಬೆನ್ನಟ್ಟಿದ್ದು, ಅದೃಷ್ಟವಶಾತ್ ಓಡಿ ತಪ್ಪಿಸಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಮೀಪದ ಮಣಿಬಾಂಡ ಕಟ್ಟೆ ನಿವಾಸಿ ದೇವರಾಜ್ ಎಂಬವರ ಕೃಷಿ ತೋಟಕ್ಕೆ ಭಾಗಷಃ ಹಾನಿಯಾಗಿದ್ದು, ಕಟ್ಟೆ, ಪೆರುಂದೋಡಿ ಪರಿಸರದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

Also Read  ಹುಬ್ಬಳ್ಳಿಗೆ ಆಗಮಿಸಿದ ರಾಹುಲ್ ಗಾಂಧಿಗೆ ಸ್ವಾಗತ ಕೋರಿದ ಜಗದೀಶ್ ಶೆಟ್ಟರ್..!

error: Content is protected !!
Scroll to Top