➤ಏ.1ರಿಂದ ದುಡಿಯುವ ಹೆಣ್ಣು ಮಕ್ಕಳಿಗೆ, ಶಾಲಾ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್

(ನ್ಯೂಸ್ ಕಡಬ) newskadaba.com. ಬೆಂಗಳೂರು. ಫೆ.21.  ರಾಜ್ಯದಲ್ಲಿ ಏಪ್ರಿಲ್ 1 ರಿಂದ ದುಡಿಯುವ ಹೆಣ್ಣು ಮಕ್ಕಳಿಗೆ ಹಾಗೂ ಶಾಲಾ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ವ್ಯವಸ್ಥೆ ಕಲ್ಪಿಸಲು ಎಲ್ಲಾ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.

ಮಂಗಳವಾರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವೋಲ್ವೋ ಮಲ್ಟಿ ಆಕ್ಸೆಲ್ ಬಿಎಸ್ 4 -9600 ಸ್ಲೀಪರ್ ಬಸ್ಸುಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಮಹಿಳೆಯರಿಗೆ ಗೌರವದ ಜೊತೆಗೆ ಆರ್ಥಿಕವಾಗಿ ಸ್ವಾವಲಂಭಿಯಾಗಲು ಈ ಯೋಜನೆ ರೂಪಿಸಲಾಗಿದೆ.

ಮಿನಿ ಸ್ಕೂಲ್ ಬಸ್‌ಗಳನ್ನು ಪರಿಚಯಿಸಬೇಕು. ಇರುವ ಬಸ್ಗಳ ಸಂಚಾರ ಆರಂಭ ಮಾಡಬೇಕು. ಶಾಲೆ ಆರಂಭವಾಗುವ ಸಂದರ್ಭದಲ್ಲಿ ಪ್ರತಿ ತಾಲೂಕಿನಲ್ಲಿ ಕನಿಷ್ಟ ಐದು ಬಸ್ ಸಂಚಾರ ಆರಂಭ ಮಾಡಬೇಕು. ಅಗತ್ಯ ಬಿದ್ದರೆ ಇನ್ನಷ್ಟು ಅನುದಾನ ನೀಡಲಾಗುವುದು ಎಂದು ತಿಳಿಸಿದರು.

error: Content is protected !!
Scroll to Top