(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.21. ಮುಂದಿನ ಮೂರು ತಿಂಗಳೊಳಗೆ ನೋಂದಾಯಿತ ಎಲ್ಲರಿಗೂ ‘ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ’ ಕಾರ್ಡ್ ವಿತರಣೆ ಮಾಡಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
ಕೆ. ಹರೀಶ್‌ಕುಮಾರ್, ಯು.ಬಿ. ವೆಂಕಟೇಶ್ ಅವರು ಪ್ರತ್ಯೇಕವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕಳೆದ ಮೂರು ವರ್ಷಗಳಲ್ಲಿ ಈ ಯೋಜನೆಯಡಿ 39.48 ಕೋಟಿ ಜನರು ಚಿಕಿತ್ಸೆ ಪಡೆದಿದ್ದು, 3 ಸಾವಿರ ಕೋಟಿ ರೂ. ಗಿಂತ ಹೆಚ್ಚು ವೆಚ್ಚ ಮಾಡಲಾಗಿದೆ. ತುರ್ತು ಸಂದರ್ಭದಲ್ಲಿ ರಾಜ್ಯದ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಯಾವುದೇ ದಾಖಲೆ ಇಲ್ಲದೆ ಇದ್ದರೂ ಚಿಕಿತ್ಸೆ ನೀಡಬೇಕು.