ಅಪರಿಚಿತ ವಾಹನ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಚಿರತೆ ಮೃತ್ಯು

(ನ್ಯೂಸ್ ಕಡಬ)newskadaba.com  ಚಿತ್ರದುರ್ಗ, ಫೆ.21. ಕೋಟೆ ನಾಡು ಚಿತ್ರದುರ್ಗದ ದೊಡ್ಡಸಿದ್ದವ್ವನ ಹಳ್ಳಿಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ವಾಹನ ಢಿಕ್ಕಿ ಹೊಡೆದು ಚಿರತೆ ಮೃತಪಟ್ಟಿದೆ. ಚಿರತೆ ರಾಷ್ಟ್ರೀಯ ಹೆದ್ದಾರಿ ದಾಟುವ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದ್ದು, ಢಿಕ್ಕಿಯಾದ ರಭಸಕ್ಕೆ ಚಿರತೆ ತೀವ್ರ ರಕ್ತದ ಮಡುವಿನಲ್ಲಿ ಬಿದ್ದಿತು.

ಕೂಡಲೇ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಕಾರಣವಾದ ವಾಹನ ಪತ್ತೆಯಾಗಿಲ್ಲ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುದ್ದಿ ತಿಳಿದ ಸುತ್ತಮುತ್ತಲ ಜನರು ಚಿರತೆ ನೋಡಲು ಸ್ಥಳಕ್ಕೆ ಧಾವಿಸುತ್ತಿದ್ದರು.

 

Scroll to Top