ಏ.01ರಿಂದ ಶಾಲಾ, ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ವ್ಯವಸ್ಥೆ..!     ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.21. ಏ.01ರಿಂದ ದುಡಿಯುವ ಹೆಣ್ಣು ಮಕ್ಕಳಿಗೆ ಹಾಗೂ ಶಾಲಾ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ವ್ಯವಸ್ಥೆ ಕಲ್ಪಿಸಲು ಎಲ್ಲ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು ಎಂದು ವರದಿಯಾಗಿದೆ.

ಇಂದು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವೋಲ್ವೋ ಮಲ್ಟಿ ಆಕ್ಸೆಲ್ ಬಿಎಸ್ 4 -9600 ಸ್ಲೀಪರ್ ಬಸ್ಸುಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದ್ದು, ಮಹಿಳೆಯರಿಗೆ ಗೌರವದ ಜೊತೆಗೆ ಆರ್ಥಿಕವಾಗಿ ಸ್ವಾವಲಂಬಿಯಾಗಲು ಈ ಯೋಜನೆ ರೂಪಿಸಲಾಗಿದೆ.

ಮಿನಿ ಸ್ಕೂಲ್ ಬಸ್ ಗಳನ್ನು ಪರಿಚಯಿಸಬೇಕು. ಇರುವ ಬಸ್ ಗಳ ಸಂಚಾರ ಆರಂಭ ಮಾಡಬೇಕು. ಶಾಲೆ ಆರಂಭವಾಗುವ ಸಂದರ್ಭದಲ್ಲಿ ಪ್ರತಿ ತಾಲೂಕಿನಲ್ಲಿ ಕನಿಷ್ಟ ಐದು ಬಸ್ ಸಂಚಾರ ಆರಂಭ ಮಾಡಬೇಕು. ಅಗತ್ಯ ಬಿದ್ದರೆ ಇನ್ನಷ್ಟು ಅನುದಾನ ನೀಡಲಾಗುವುದು ಎಂದರು ಎನ್ನಲಾಗಿದೆ.

Also Read  ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ: ತಂದೆಯ ಶವವನ್ನು ಬೈಕ್ ನಲ್ಲಿ ಸಾಗಿಸಿದ ಸಹೋದರರು..!

 

 

error: Content is protected !!
Scroll to Top