ವರದಕ್ಷಿಣೆಯಾಗಿ ‘ಹಳೆಯ’ ಪೀಠೋಪಕರಣ ನೀಡಿದಕ್ಕೆ ಮದುವೆ ರದ್ದುಗೊಳಿಸಿದ ವರ..!

(ನ್ಯೂಸ್ ಕಡಬ)newskadaba.com ಹೈದರಾಬಾದ್, ಫೆ.21. ವಧುವಿನ ಮನೆಯವರು ವರದಕ್ಷಿಣೆಯಾಗಿ “ಹಳೆಯ” ಪೀಠೋಪಕರಣಗಳನ್ನು ನೀಡಿದ್ದಾರೆ ಎಂಬ ಕಾರಣಕ್ಕೆ ವರ ಮದುವೆಯನ್ನೇ ರದ್ದುಗೊಳಿಸಿದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.


ಬಸ್ ಚಾಲಕನಾಗಿ ಕೆಲಸ ಮಾಡುತ್ತಿರುವ ವರ ಭಾನುವಾರ ನಡೆಯಬೇಕಿದ್ದ ಮದುವೆಗೆ ಬಾರದ ಹಿನ್ನೆಲೆಯಲ್ಲಿ ವಧುವಿನ ತಂದೆ ದೂರು ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Scroll to Top