ನಾಳೆ(ಡಿ.30) ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕರ್ನಾಟಕಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.29. ಬಿಡದಿಯಲ್ಲಿರುವ ಬಿವಿವಿ ಸಂಘದ ಅಮೃತಾ ಎಂಜಿನಿಯರಿಂಗ್ ಕಾಲೇಜಿನ ನೂತನ ಕ್ಯಾಂಪಸ್ ಅನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್ ಡಿಸೆಂಬರ್ 30 ಶನಿವಾರದಂದು ಲೋಕಾರ್ಪಣೆ ಮಾಡಲಿದ್ದಾರೆ.

ಬಾಗಲಕೋಟೆಯ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘ ವತಿಯಿಂದ ಬೆಂಗಳೂರಿನಲ್ಲಿ ನೂತನ ಕಾಲೇಜು ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ, ಕೇಂದ್ರ ಸಚಿವ ಅನಂತ್‌ಕುಮಾರ್, ಸಚಿವ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವರು ಪಾಲ್ಗೊಳ್ಳಲಿದ್ದಾರೆ.

Also Read  100ಕ್ಕೂ ಹೆಚ್ಚು ದೇಶಗಳಿಗೆ ಮಸಾಲೆ ಘಮ ಪಸರಿಸಿದ M.D.H ಮಾಲೀಕ ಧರ್ಮಪಾಲ್ ಇನ್ನಿಲ್ಲ

error: Content is protected !!
Scroll to Top