(ನ್ಯೂಸ್ ಕಡಬ)newskadaba.com ದಕ್ಷಿಣ ಕನ್ನಡ, ಫೆ.21. ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ನೈಲ ಎಂಬಲ್ಲಿ ಅಟ್ಟಹಾಸ ಮೆರೆದಿದ್ದ ಕಾಡಾನೆ ಎರಡು ಜೀವಗಳನ್ನು ಬಲಿ ಪಡೆದಿತ್ತು. ಇದರ ಬೆನ್ನಲ್ಲೆ ಕಾಡಾನೆಗಳನ್ನು ಸೆರೆ ಹಿಡಿಯಲು ಕಡಬ ಭಾಗದಲ್ಲಿ ‘ಆಫರೇಷನ್ ಎಲಿಫೆಂಟ್’ ಕಾರ್ಯಾಚರಣೆ ಆರಂಭವಾಗಿದೆ. ಸಕಲ ಸಿದ್ಧತೆಗಳೊಂದಿಗೆ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ಆರಂಭಿಸಿದ್ದಾರೆ.
ಅಭಿಮನ್ಯು, ಪ್ರಶಾಂತ್, ಹರ್ಷ, ಕಂಜನ್ ಹಾಗೂ ಮಹೇಂದ್ರ ಕಾಡಾನೆ ಸೆರೆ ಹಿಡಿಯುವುದರಲ್ಲಿ ಕರಗತವಾಗಿವೆ. ಹೀಗಾಗಿ ಈ ಸಾಕಾನೆಗಳು ಕಾರ್ಯಾಚರಣೆಗೆ ಲಗ್ಗೆ ಇಟ್ಟಿವೆ. ಅರಣ್ಯ ಇಲಾಖೆಯ ಸಿಬ್ಬಂದಿಗಳ ತಂಡ ಅಲ್ಲಲ್ಲಿ ವೀಕ್ಷಣೆ ನಡೆಸಿ ಹಾಗು ಡ್ರೋನ್ ಬಳಸಿ ಕಾಡಾನೆಯ ಚಲನ ವಲನಗಳನ್ನು ಪತ್ತೆ ಹಚ್ಚುತ್ತಿದ್ದು, ಸಾಕಾನೆಗಳ ಸಹಕಾರದಲ್ಲಿ ಕಾಡಾನೆಯನ್ನು ಹಿಡಿಯಲು ಮುಂದಾಗಿದೆ.