(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.21. ಮಾರ್ಚ್ 9 ರಿಂದ 29 ರವರೆಗೂ ದ್ವೀತಿಯ ಪಿಯು ಪರೀಕ್ಷೆಗಳು ನಡೆಯಲಿದ್ದು, ಇದೆ ಮೊದಲ ಬಾರಿಗೆ ಪಿಯುಸಿ ಪರೀಕ್ಷೆಯಲ್ಲಿ ಮಲ್ಟಿಪಲ್ ಚಾಯ್ಸ್ ಇರಲಿದೆ. ಮಕ್ಕಳು ಪಾಸಾಗಲು 3 ಹಂತದ ಪ್ರಶ್ನೆಗಳು ಇರಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ನಡೆದ ಸಭೆ ಬಳಿಕ ಮಾತನಾಡಿದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಒಟ್ಟು 5716 ಕಾಲೇಜುಗಳು ಭಾಗಿಯಾಗಲಿವೆ. ಒಟ್ಟು 7,27,387 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ. 1109 ಒಟ್ಟು ಪರೀಕ್ಷಾ ಕೇಂದ್ರಗಳು ಇರಲಿದೆ ಎಂದು ತಿಳಿಸಿದರು.