➤ ಹೈಕೋರ್ಟ್ ವಕೀಲ ವಿ.ಶ್ರೀನಿಧಿ ಹೃದಯಾಘಾತದಿಂದ ನಿಧನ!

(ನ್ಯೂಸ್ ಕಡಬ) newskadaba.com.ಬೆಂಗಳೂರು. ಫೆ.21.  ಬೆಂಗಳೂರು ಹೈಕೋರ್ಟ್ ನಲ್ಲಿ ಸರ್ಕಾರಿ ವಕೀಲರಾಗಿದ್ದ ವಿ.ಶ್ರೀನಿಧಿ(46) ಇಂದು ಮಧ್ಯಾಹ್ನ 2.25ಕ್ಕೆ ಮಲ್ಲೇಶ್ವರದ ಅಪೊಲೊ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು.

ಅವರು ಪತ್ನಿ, ಒಬ್ಬ ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ. ಹಿರಿಯೂರು ತಾಲ್ಲೂಕಿನ ಐಮಂಗಲ ಹೋಬಳಿಯ ತಾಳವಟ್ಟಿ ಗ್ರಾಮದ ಶ್ರೀನಿಧಿ ಕಳೆದ ಎಂಟು ವರ್ಷಗಳಿಂದ ಸರ್ಕಾರದ ಪರ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಪರ ವಕೀಲರಾಗಿ ಮಹತ್ವದ ಪ್ರಕರಣಗಳನ್ನು ಯಶಸ್ವಿಯಾಗಿ ನಿಭಾಯಿಸಿದ ವಕೀಲರೆನಿಸಿದ್ದರು.

Also Read  ಸ್ಯಾಂಟ್ರೋ ರವಿ ಕೇಸ್ ಸಿಐಡಿಗೆ ವರ್ಗಾವಣೆ ! ➤  ಗೃಹ ಸಚಿವ ಆರಗ ಜ್ಞಾನೇಂದ್ರ..!

error: Content is protected !!
Scroll to Top