ಉಪ್ಪಿನಂಗಡಿ: ಬಸ್ ನಿಂದ ಹೊರಕ್ಕೆಸೆಯಲ್ಪಟ್ಟ ಶಾಲಾ ವಿದ್ಯಾರ್ಥಿ ► ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ.29. ಪ್ರವಾಸಕ್ಕೆಂದು ಬಂದಿದ್ದ ಶಾಲಾ ವಿದ್ಯಾರ್ಥಿಯೋರ್ವ ಬಸ್‌ನಿಂದ‌ ಹೊರಕ್ಕೆಸೆಯಲ್ಪಟ್ಟು ಮೃತಪಟ್ಟ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಶಿರಾಡಿ ಗ್ರಾಮದ ಕೊಡ್ಯಕಲ್ಲು ಎಂಬಲ್ಲಿ ಶುಕ್ರವಾರದಂದು ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಮಂಡ್ಯ ಜಿಲ್ಲೆಯ ನೇತ್ರ ಹಿರಿಯ ಪ್ರಾಥಮಿಕ ಶಾಲೆಯ ಏಳನೇ ತರಗತಿ ವಿದ್ಯಾರ್ಥಿ, ಮಂಡ್ಯದ ಭೂತನವಸೂರು ಗ್ರಾಮದ ನಿವಾಸಿ ಚಂದ್ರು(12) ಎಂದು ಗುರುತಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವಾಸಕ್ಕೆಂದು ಆಗಮಿಸಿದ್ದ ಇವರು ಪ್ರಯಾಣಿಸುತ್ತಿದ್ದ ಬಸ್‌ನ ಬಾಗಿಲು ತೆರೆಯಲ್ಪಟ್ಟಿದ್ದು ಬಾಗಿಲ ಬಳಿ ಕುಳಿತಿದ್ದ ಚಂದ್ರ ಬಸ್‌ನಿಂದ ಹೊರಗೆಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ.

Also Read  ಉಡುಪಿ : ಇಂದು ರಾತ್ರಿಯಿಂದ ಉಡುಪಿ ಜಿಲ್ಲೆಯ ಗಡಿಗಳು 14ದಿನಗಳ ಕಾಲ ಸೀಲ್‌ಡೌನ್

ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

error: Content is protected !!
Scroll to Top