ವಿಟ್ಲ: ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವ ನಾಟಕವಾಡಿ ವಂಚನೆ ► ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಬಾಲಕಿಯ ಮಿದುಳು ನಿಷ್ಕ್ರಿಯ

(ನ್ಯೂಸ್ ಕಡಬ) newskadaba.com ವಿಟ್ಲ, ಡಿ.30. ಯುವಕನೋರ್ವ ಪ್ರೀತಿಸುವ ನಾಟಕವಾಡಿ 9 ನೇ ತರಗತಿಯ ಅಪ್ರಾಪ್ತ ಬಾಲಕಿಯನ್ನು ವಂಚಿಸಿ ಇದೀಗ ಬೇರೆ ಹುಡುಗಿಯೊಂದಿಗೆ ಮದುವೆ ನಿಶ್ಚಯಿಸಲು ಸಿದ್ಧತೆ ನಡೆಸಿದ್ದರಿಂದ ಮನನೊಂದ ಬಾಲಕಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವಿಟ್ಲದ ಮಂಗಳಪದವು ಎಂಬಲ್ಲಿ ನಡೆದಿದೆ.

ವಂಚಿಸಿದ ಯುವಕನನ್ನು ಮಂಗಳಪದವು ದರ್ಖಾಸ್ ನಿವಾಸಿ ರಶೀದ್ ಎಂದು ಗುರುತಿಸಲಾಗಿದ್ದು, ಈತ ಅಪ್ರಾಪ್ತ ಬಾಲಕಿಯನ್ನು ವಂಚಿಸಿ ತಿಂಗಳ ಹಿಂದೆ ವಿದೇಶಕ್ಕೆ ಪಲಾಯನಗೈದಿದ್ದಾನೆ ಎನ್ನಲಾಗಿದೆ. ಇದೀಗ ಬೇರೆ ಹುಡುಗಿಯೊಂದಿಗೆ ನಿಶ್ಚಿತಾರ್ಥಕ್ಕೆ ಸಿದ್ಧತೆ ನಡೆಸಿದ್ದರಿಂದ ಮನನೊಂದ ಬಾಲಕಿ ಶುಕ್ರವಾರದಂದು ನೇಣುಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದು, ಇದೀಗ ಮಿದುಳು ನಿಷ್ಕ್ರಿಯಗೊಂಡು ಜೀವನ್ಮರಣ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top