ದ್ವಿಚಕ್ರ ವಾಹನದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ !      ➤  ಓರ್ವ ಆರೋಪಿಯ ಬಂಧನ

(ನ್ಯೂಸ್ ಕಡಬ)newskadaba.com ಉಡುಪಿ, ಫೆ.23. ದ್ವಿಚಕ್ರ ವಾಹನದಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಕೊರಂಗ್ರಪಾಡಿ, ಮಾತಾ ಶ್ರೀ ವಾಸುಕಿ ನಗರ 5 ನೇ ಕ್ರಾಸ್ ನ ಇಕ್ಬಾಲ್ ಶೇಕ್ (32) ಎಂದು ಗುರುತಿಸಲಾಗಿದೆ.

ಮಣಿಪಾಲದ ಆರ್.ಟಿ.ಓ ಬಳಿ ಸ್ಕೂಟಿಯಲ್ಲಿ ಮಾದಕ ವಸ್ತು ಹಾಗೂ ಗಾಂಜಾ ಮಾರುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದಿದ್ದು, ಆರೋಪಿಯ ವಶದಲ್ಲಿದ್ದ 136 ಗ್ರಾಂ ಗಾಂಜಾ ‌, 0.36 ಗ್ರಾಂ ಎಂ ಡಿ ಎಂ ಎ (ಪ್ಲಾಸ್ಟಿಕ್ ಕವರ್‌ ಸಮೇತ), 1 ಮೊಬೈಲ್ ಪೋನ್, ವೈಫೈ ರೂಟರ್, ನಗದು, ದ್ವಿಚಕ್ರ ವಾಹನ ಸಹಿತ ಒಟ್ಟಾರೆ 44,700ರೂ ,ಮೌಲ್ಯದ ಸೊತ್ತು ಸ್ವಾಧೀನಪಡಿಸಿಕೊಂಡಿದ್ದಾರೆ.

Also Read  ಕೊರೋನಾ ಸೋಂಕು: ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಆಸ್ಪತ್ರೆಗೆ ದಾಖಲು

 

error: Content is protected !!
Scroll to Top