(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.23. ಕರ್ನಾಟಕದಲ್ಲಿ ರಾಜ್ಯ ಸರ್ಕಾರದಿಂದ 1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯಗೊಳಿಸಿ ಆದೇಶಿಸಿತ್ತು. ಆ ಬಳಿತ ತೀವ್ರ ವಿರೋಧದ ನಂತರ, ಮುಂದಿನ ಶೈಕ್ಷಣಿಕ ವರ್ಷದಿಂದ ಜಾರಿಗೊಳಿಸೋದಾಗಿ ಆದೇಶದಲ್ಲಿ ತಿಳಿಸಿತ್ತು. ಇದೀಗ ಕೇಂದ್ರದ ಶಿಕ್ಷಣ ಸಚಿವಾಲಯದಿಂದಲೇ ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಶಾಲೆಗಳಲ್ಲಿ 1ನೇ ತರಗತಿ ದಾಖಲು ಮಾಡಲು 6 ವರ್ಷ ನಿಗದಿ ಮಾಡುವಂತೆ ನಿರ್ದೇಶನ ನೀಡಿದೆ.
ಪ್ರಸ್ತುತ ದೇಶದ ಬೇರೆ ಬೇರೆ ರಾಜ್ಯಗಳಲ್ಲಿ 1ನೇ ತರಗತಿಗೆ ಮಕ್ಕಳ ದಾಖಲು ಆಗೋದಕ್ಕೆ ಕನಿಷ್ಠ ವಯೋಮಿತಿ ಬೇರೆ ಬೇರೆಯೇ ಆಗಿದೆ. ಆದ್ರೇ ಈಗ ದೇಶಾದ್ಯಂತ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ (NEP) ಜಾರಿ ಹಿನ್ನಲೆಯಲ್ಲಿ, ಎಲ್ಲಾ ರಾಜ್ಯಗಳಲ್ಲೂ ಸಮಾನ ವಯೋಮಿತಿ ನಿಗದಿಪಡೆಸುವಂತೆ ಕೇಂದ್ರ ಶಿಕ್ಷಣ ಸಚಿವಾಲಯ ಸೂಚಿಸಿದೆ.