ಒಂದೇ ತಿಂಗಳಿನಲ್ಲಿ ರೂ.6.7 ಲಕ್ಷ ದಂಡ ಸಂಗ್ರಹಿಸಿದ ಬಿಎಂಟಿಸಿ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಫೆ.23. ಸಂಸ್ಥೆಯ ಆದಾಯ ಸೋರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆಸಿರುವ ಬಿಎಂಟಿಸಿ, ದಂಡದ ರೂಪದಲ್ಲಿ ಜನವರಿ ಒಂದೇ ತಿಂಗಳಿನಲ್ಲಿ 6.77 ಲಕ್ಷ ರುಪಾಯಿಗಳನ್ನು ಸಂಗ್ರಹಿಸಿದೆ.

ಬಿಎಂಟಿಸಿ ಸಂಸ್ಥೆಯ ತನಿಖಾ ತಂಡಗಳು 2023ರ ಜನವರಿ ತಿಂಗಳಿನಲ್ಲಿ ಒಟ್ಟು 16,226 ಟ್ರಿಪ್‌ಗಳನ್ನು ತಪಾಸಣೆ ಮಾಡಿದ್ದು, ಈ ವೇಳೆ 3591 ಟಿಕೇಟ್ ರಹಿತ ಪ್ರಯಾಣಿಕರನ್ನು ಪತ್ತೆ ಮಾಡಿದೆ. ಇದರಿಂದ ಒಟ್ಟು ರೂ. 6,77,190 ದಂಡ ವಸೂಲಿಯಾಗಿದೆ. ಸಂಸ್ಥೆಯ ನಿರ್ವಾಹಕರ ವಿರುದ್ಧ 1,521 ಪ್ರಕರಣಗಳ ದಾಖಲಾಗಿದೆ.

Also Read  ಏ.01ರಿಂದ ಶಾಲಾ, ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ವ್ಯವಸ್ಥೆ..!     ➤ ಸಿಎಂ ಬೊಮ್ಮಾಯಿ

 

error: Content is protected !!
Scroll to Top