(ನ್ಯೂಸ್ ಕಡಬ)newskadaba.com ಮಣಿಪಾಲ, ಫೆ.23. ಅನೈತಿಕ ವೇಶ್ಯಾವಾಟಿಕೆ ನಡೆಸುತ್ತಿದ್ದ ಲಾಡ್ಜ್ ವೊಂದಕ್ಕೆ ಪೊಲೀಸರು ದಾಳಿ ನಡೆಸಿ ಇಬ್ಬರು ಮಹಿಳೆ ಸೇರಿ ಮೂವರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.
ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ಅನೈತಿಕ ವೇಶ್ಯಾವಟಿಕೆಯಲ್ಲಿ ತೊಡಗಿದವರನ್ನು ವಶಕ್ಕೆ ಪಡೆದು ಅವರ ವಶದಲ್ಲಿದ್ದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ಹೋಟೆಲ್ನ ಮೇನೇಜರ್ ಸಂಪತ್ ಕುಮಾರ್ ಮತ್ತು ಕೆಲಸಕ್ಕೆ ಇರುವ ಸಂತೋಷ್ ಮತ್ತು ದಿನೇಶ್ ಇವರು ಹೆಂಗಸರನ್ನು ಅನೈತಿಕ ವೇಶ್ಯವಾಟಿಕೆ ಚಟುವಟಿಕೆ ಮಾಡುವಂತೆ ಈ ರೂಮಿನಲ್ಲಿ ಇರಿಸಿದ್ದಾರೆಂದು ವರದಿಯಾಗಿದೆ.