ಉಡುಪಿ ಕ್ಯಾಂಪಸ್‌ನಲ್ಲಿ ಹೆಚ್ಚುತ್ತಿರುವ ಮಾದಕ ವ್ಯಸನ ಪ್ರಕರೆಣ ➤ 42 ವಿದ್ಯಾರ್ಥಿಗಳ ಅಮಾನತು

(ನ್ಯೂಸ್ ಕಡಬ) newskadaba.com. ಮಂಗಳೂರು. ಫೆ.23. ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಎಂಎಎಚ್ಇ) ವಿದ್ಯಾರ್ಥಿಗಳು  ಮಾದಕ ವ್ಯಸನ ಪ್ರಕರಣಗಳಲ್ಲಿ ಭಾಗಿಯಾಗಿರುವುದು ಕಂಡು ಬಂದಿದ್ದು, ಈ ಒಂದು ತಿಂಗಳಲ್ಲಿ 42 ವಿದ್ಯಾರ್ಥಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ.

ಇಂತಹ ಕ್ರಮಗಳಿಂದ ಸಮಾಜಕ್ಕೆ ಬಲವಾದ ಸಂದೇಶ ರವಾನೆಯಾಗುತ್ತದೆ ಹಾಗೂ ಮಾದಕ ವಸ್ತುಗಳ ಸೇವನೆಯ ವಿರುದ್ಧ ಜಾಗೃತಿ ಮೂಡಿಸುತ್ತದೆ. ಉಡುಪಿಯಲ್ಲಿ ಡ್ರಗ್ಸ್ ಹಾವಳಿಗೆ ಕೆಲವು ವಿದ್ಯಾರ್ಥಿಗಳು ಬಲಿಯಾಗಿದ್ದಾರೆ ಎಂದು ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಹಾಕೇ ಅಕ್ಷಯ್ ಮಚ್ಚೀಂದ್ರ ಉಡುಪಿಯಲ್ಲಿ ಸುದ್ದಿಗಾರರಿಗೆ ತಿಳಿಸಿದರು.

Scroll to Top