➤ ಮಡಿಕೇರಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಅಹ್ವಾನ!

(ನ್ಯೂಸ್ ಕಡಬ) newskadaba.com. ಮಡಿಕೇರಿ ಫೆ.23. ಜಿಲ್ಲೆಯ ಯೋಜನೆಯ 3 ಅಂಗನವಾಡಿ ಕಾರ್ಯಕರ್ತೆ ಹಾಗೂ 4 ಅಂಗನವಾಡಿ ಸಹಾಯಕಿಯರು, ಸೋಮವಾರಪೇಟೆ ಯೋಜನೆಯ 3 ಅಂಗನವಾಡಿ ಕಾರ್ಯಕರ್ತೆಯರು,  12 ಅಂಗನವಾಡಿ ಸಹಾಯಕಿಯರು ಮತ್ತು ಪೊನ್ನಂಪೇಟೆ ಯೋಜನೆಯ 11 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 22 ಅಂಗನವಾಡಿ ಸಹಾಯಕಿಯರ ಹುದ್ದೆಯನ್ನು ಭರ್ತಿಮಾಡಲು ಭೌತಿಕವಾಗಿ (ಅಪ್ ಲೈನ್) ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಮಾರ್ಚ್ 24 ಕೊನೆ ದಿನವಾಗಿದೆ. ಕಾರ್ಯಕರ್ತೆ ಹುದ್ದೆಗೆ ಪಿಯುಸಿ ತೇರ್ಗಡೆ ಹಾಗೂ ಸಹಾಯಕಿ ಹುದ್ದೆಗೆ ಎಸ್ಸೆಸ್ಸೆಲ್ಸಿ ತೇರ್ಗಡೆ ಹೊಂದಿರಬೇಕು. 19 ರಿಂದ 35 ವರ್ಷ ವಯೋಮಿತಿಯೊಳಗಿರುವ ಹೆಣ್ಣು ಮಕ್ಕಳು ಹಾಗೂ ಮಹಿಳಾ ಲಿಂಗತ್ವ ಅಲ್ಪಸಂಖ್ಯಾತರು ಹಾಗೂ ಅಂಗನವಾಡಿ ಕೇಂದ್ರಕ್ಕೆ ಒಳಪಟ್ಟ ಗ್ರಾಮ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಹರಾಗಿರುತ್ತಾರೆ. ಅಂಗವಿಕಲ ಅಭ್ಯರ್ಥಿಗಳಿಗೆ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಲು ವಯೋಮಿತಿಯಲ್ಲಿ 10 ವರ್ಷಗಳ ಸಡಿಲಿಕೆ ಇದೆ.

Also Read  ತಡರಾತ್ರಿ ಭೀಕರ ಬೆಂಕಿ ಅವಘಢ  ➤ ಒಂದೇ ಕುಟುಂಬದ 6 ಮಂದಿ ಸಜೀವ ದಹನ     

ದೈಹಿಕ ಅಂಗವಿಕಲತೆಯ ಪ್ರಮಾಣವು ಶೇ.40 ಕ್ಕಿಂತ ಅಧಿಕವಿರಬಾರದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿಯನ್ನು ಮಡಿಕೇರಿ, ಸೋಮವಾರಪೇಟೆ ಹಾಗೂ ಪೊನ್ನಂಪೇಟೆ ಶಿಶು ಅಭಿವೃದ್ಧಿ ಯೋಜನಾ ಕಚೇರಿಯಲ್ಲಿ ಪಡೆದುಕೊಳ್ಳಬಹುದು. ಅರ್ಜಿಯನ್ನು ಭರ್ತಿ ಮಾಡಿ ಮಡಿಕೇರಿ ತಾಲೂಕಿಗೆ ಒಳಪಡುವವರು ಶಿಶು ಅಭಿವೃದ್ಧಿ ಯೋಜನಾ ಕಚೇರಿ, ಮಡಿಕೇರಿ, ಸೋಮವಾರಪೇಟೆ ಹಾಗೂ ಕುಶಾಲನಗರ ತಾಲೂಕಿನವರು ಶಿಶು ಅಭಿವೃದ್ಧಿ ಯೋಜನಾ ಕಚೇರಿ, ಸೋಮವಾರಪೇಟೆ ಹಾಗೂ ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲೂಕಿನವರು ಪೊನ್ನಂಪೇಟೆ ಯೋಜನೆಯ ಕಚೇರಿ ವೇಳೆಯಲ್ಲಿ  ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ 08272-298379, ಮಡಿಕೇರಿ ಶಿಶು ಅಭಿವೃದ್ಧಿ ಯೋಜನಾ ಕಚೇರಿ 08272-295087, 9108810782, ಸೋಮವಾರಪೇಟೆ ಶಿಶು ಅಭಿವೃದ್ಧಿ ಯೋಜನಾ ಕಚೇರಿ 08276-282281, 9901806823, ಪೊನ್ನಂಪೇಟೆ ಶಿಶು ಅಭಿವೃದ್ಧಿ ಯೋಜನಾ ಕಚೇರಿ 08274-249010, 9902323174 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಎನ್.ಮಂಜುನಾಥ್ ಅವರು ತಿಳಿಸಿದ್ದಾರೆ.

error: Content is protected !!
Scroll to Top