(ನ್ಯೂಸ್ ಕಡಬ) newskadaba.com. ಹೊಸದಿಲ್ಲಿ. ಫೆ.23. 2.45 ಕೋಟಿ ರೂಪಾಯಿಗೂ ಅಧಿಕ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶ ಎಸ್.ಎನ್ ಶುಕ್ಲಾ ಹಾಗೂ ಅವರ ಪತ್ನಿ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ. ಅವರು ಹೈಕೋರ್ಟ್ ನ್ಯಾಯಾಧೀಶರಾಗಿದ್ದ (2014-19) ಅವಧಿಯಲ್ಲಿ ಕೋಟ್ಯಂತರ ಮೌಲ್ಯದ ಅಕ್ರಮ ಆಸ್ತಿ ಸಂಪಾದಿಸಿದ್ದಾರೆ ಎಂಬ ಆರೋಪವಿದೆ.
ಇದು ಶುಕ್ಲಾ ವಿರುದ್ಧದ ಎರಡನೇ ಭ್ರಷ್ಟಾಚಾರ ಪ್ರಕರಣವಾಗಿದೆ. ಇದಕ್ಕೂ ಮುನ್ನ 2019ರ ಡಿಸೆಂಬರ್‌ನಲ್ಲಿ ಇವರ ವಿರುದ್ಧ ಪ್ರಕರಣವೊಂದು ದಾಖಲಾಗಿತ್ತು. ಲಕ್ನೋದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸುವ ವಿಚಾರದಲ್ಲಿ ತೀರ್ಪು ನೀಡಲು ಅವರು ಹಣ ಸ್ವೀಕರಿಸಿದ್ದರು ಎಂಬ ಆರೋಪ ಕೂಡ ಇವರ ಮೇಲಿದೆ ಎಂದು ತಿಳಿದು ಬಂದಿದೆ.