ಕುಡಿತದ ಮತ್ತಿನಲ್ಲಿ ಕೆಎಸ್ಆರ್‌ಟಿಸಿ ಬಸ್ಸಿನ ಸೀಟಿನ ಮೇಲೆ ಮೂತ್ರ ವಿಸರ್ಜನೆ ➤ದೂರು ದಾಖಲು

ನ್ಯೂಸ್ ಕಡಬ) newskadaba.com.ಬೆಂಗಳೂರು. ಫೆ.23. ಸರ್ಕಾರಿ ಬಸ್ಸಿನಲ್ಲಿ ಪ್ರಯಾಣಿಸುವಾಗ ಕುಡಿದ ಮತ್ತಿನಲ್ಲಿ ಮಹಿಳಾ ಸಹ ಪ್ರಯಾಣಿಕರ ಸೀಟಿನ ಮೇಲೆ ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿಯೊಬ್ಬನ ವಿರುದ್ಧ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ದೂರು ದಾಖಲಿಸಿದೆ.

ವಿಜಯಪುರದಿಂದ ಮಂಗಳೂರಿಗೆ ತೆರಳುತ್ತಿದ್ದ ನಾನ್ ಸ್ಲೀಪರ್ ಬಸ್‌ನಲ್ಲಿ ಈ ಘಟನೆ ನಡೆದಿತ್ತು. ಮೆಕ್ಯಾನಿಕಲ್ ಇಂಜಿನಿಯರ್ ಆಗಿರುವ 32 ವರ್ಷದ ವ್ಯಕ್ತಿಯೊಬ್ಬರು ಈ ಕೃತ್ಯ ಎಸಗಿರುವುದು ಎಂದು ತಿಳಿದು ಬಂದಿದೆ. ‘ಬಸ್‌ನಲ್ಲಿ ಮೂತ್ರ ವಿಸರ್ಜನೆ ಮಾಡಿದ ಪ್ರಯಾಣಿಕನ ಬಗ್ಗೆ ಮಾಹಿತಿ ಪಡೆಯಲು ಚಾಲಕ ಮತ್ತು ಕಂಡಕ್ಟರ್ ಪ್ರಯತ್ನಿಸಿದ್ದಾರೆ. ಆದರೆ, ಆರೋಪಿ ಕ್ಷಮೆಯಾಚಿಸಿದ್ದು, ತನ್ನ ವೈಯಕ್ತಿಕ ವಿವರಗಳನ್ನು ಬಹಿರಂಗಪಡಿಸಿಲ್ಲ. ಮಹಿಳಾ ಪ್ರಯಾಣಿಕರು ದೂರು ದಾಖಲಿಸಲು ನಿರಾಕರಿಸಿದ್ದರಿಂದ ಬಸ್ ನಿಗದಿತ ಪ್ರಯಾಣ ಮುಂದುವರಿಸಿದೆ’ ಎಂದು ತಿಳಿಸಿದೆ.

Also Read  ಸಾಹಸಸಿಂಹ ವಿಷ್ಣುವರ್ಧನ್ ಬಗ್ಗೆ ಅವಹೇಳನ ➤ ಮಂಡಿಯೂರಿ, ಅತ್ತು ಕನ್ನಡಿಗರಲ್ಲಿ ಕ್ಷಮೆಯಾಚಿಸಿದ ತೆಲುಗು ನಟ ವಿಜಯ್ ರಂಗರಾಜು

ಪ್ರತ್ಯಕ್ಷದರ್ಶಿಗಳ ಪ್ರಕಾರ, ಹುಬ್ಬಳ್ಳಿ ನಗರ ಸಮೀಪದ ಕಿರೇಸೂರಿನಲ್ಲಿ ರಾತ್ರಿ ಊಟಕ್ಕೆ ಬಸ್ ನಿಲ್ಲಿಸಿದಾಗ 20 ವರ್ಷದ ಮಹಿಳೆಯ ಸೀಟಿನ ಮೇಲೆ ವ್ಯಕ್ತಿ ಮೂತ್ರ ವಿಸರ್ಜನೆ ಮಾಡಿದ್ದಾರೆ. ಯುವತಿ ಆಹಾರ ಸೇವಿಸಲು ಇಳಿದು ಹಿಂದಿರುಗಿದಾಗ ಆರೋಪಿ ತನ್ನ ಸೀಟಿನಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದುದನ್ನು ಕಂಡು ಕೂಗಿದ್ದಾರೆ. ಘಟನೆ ನಡೆದಾಗ ಬಸ್‌ ಖಾಲಿಯಾಗಿತ್ತು, ಗದ್ದಲ ಕೇಳಿ ಜನರು ಧಾವಿಸಿದರು ಎಂದು ಮೂಲಗಳು ತಿಳಿಸಿವೆ.

error: Content is protected !!
Scroll to Top