ಕಾಡಾನೆ ಸೆರೆ ಕಾರ್ಯಾಚರಣೆ ನಂತರ ಸ್ಥಳದಲ್ಲಿ ವಾಗ್ವಾದ ➤ ಅಧಿಕಾರಿಗಳಿಗೆ ಹಲ್ಲೆ

(ನ್ಯೂಸ್ ಕಡಬ) newskadaba.com ಕಡಬ, ಫೆ.23. ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆಯ ನಂತರ ಉಳಿದ ಆನೆಗಳನ್ನು ಸೆರೆ ಹಿಡಯುವಂತೆ ಆಗ್ರಹಿಸಿ ಸಾರ್ವಜನಿಕರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಈ ವೇಳೆ ಅರಣ್ಯ ಇಲಾಖೆ ಹಾಗೂ ಪೊಲೀಸ್ ಜೀಪ್ ಗೆ ಹಾನಿಗೈದಿರುವ ಘಟನೆ ವರದಿಯಾಗಿದೆ.

ನರಹಂತಕ ಆನೆಯನ್ನು ಸೆರೆ ಹಿಡಿದು ಸ್ಥಳಾಂತರಿಸಿದ ನಂತರ ಕಾರ್ಯಾಚರಣೆ ಮುಂದುವರಿಸುವುದಾಗಿ ಅಧಿಕಾರಿಗಳು ಸಾರ್ವಜನಿಕರಲ್ಲಿ ಅರಿವು ಮೂಡಿಸಿದ್ದು, ಇದಕ್ಕೊಪ್ಪದ ಸಾರ್ವಜನಿಕರನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ ಎನ್ನಲಾಗಿದೆ. ಈ ವೇಳೆ ಯಾರೋ ಕಿಡಿಗೇಡಿಗಳು ಇಲಾಖೆಯ ವಾಹನಗಳಿಗೆ ಹಾನಿ ಉಂಟುಮಾಡಿ ಅಧಿಕಾರಿಗಳಿಗೆ ಹಲ್ಲೆಗೈದಿದ್ದು, ಘಟನೆಗೆ ಸಂಬಂಧಿಸಿ ಓರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Also Read  ರಾಜ್ಯ ವಕ್ಫ್ ಮಂಡಳಿ ನೂತನ ಅಧ್ಯಕ್ಷರಾಗಿ ಮೌಲಾನಾ ಶಾಫಿ ಸ-ಅದಿ ಆಯ್ಕೆ

 

error: Content is protected !!
Scroll to Top