(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.24. ದಿನಗೂಲಿ ಆಧಾರದಲ್ಲಿ ಭಿಕ್ಷಾಟನೆ ಮಾಡುತ್ತಿದ್ದ 55ಕ್ಕೂ ಅಧಿಕ ಭಿಕ್ಷುಕರನ್ನು ಸಿಸಿಬಿ ಮಹಿಳಾ ಸಂರಕ್ಷಣೆ ದಳದ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನ ವಿವಿಧೆಡೆ 14 ತಂಡಗಳನ್ನು ರಚಿಸಿ ಭಿಕ್ಷಾಟನೆ ಮಾಡುವವರನ್ನು ರಕ್ಷಣೆ ಮಾಡಲಾಗಿದೆ.ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಿದ್ದ ಸಿಸಿಬಿ ಸಿಬ್ಬಂದಿ ಮಹಿಳೆಯರು, ಮಕ್ಕಳು ಸೇರಿ 55 ಮಂದಿಯನ್ನು ರಕ್ಷಣೆ ಮಾಡಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಪುನರ್ವಸತಿ ಕಲ್ಪಿಸಲಾಗಿದೆ.
