(ನ್ಯೂಸ್ ಕಡಬ) newskadaba.com ಕಡಬ, ಡಿ.30. ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಇಚಿಲಂಪಾಡಿ ಎಂಬಲ್ಲಿ ಬೈಕೊಂದು ಸ್ಕಿಡ್ ಆಗಿ ಬಿದ್ದುದರ ಪರಿಣಾಮ ಸವಾರ ಗಾಯಗೊಂಡ ಘಟನೆ ಶನಿವಾರದಂದು ನಡೆದಿದೆ.
ಗಾಯಾಳು ಬೈಕ್ ಸವಾರನನ್ನು ಕಡಬ ಸಮೀಪದ ಪಿಜಕ್ಕಳ ನಿವಾಸಿ ರಾಜು ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡಿರುವ ಇವರನ್ನು ಕಡಬದ 108 ಆಂಬ್ಯುಲೆನ್ಸ್ ಮೂಲಕ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿದ್ದಾರೆ.
Also Read ಸೆ.16: ಕಡಬ ವಲಯ ಒಕ್ಕಲಿಗ ಗೌಡ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ► ಚುನಾಯಿತ ಪ್ರತಿನಿಧಿಗಳಿಗೆ ಅಭಿನಂದನೆ