(ನ್ಯೂಸ್ ಕಡಬ)newskadaba.com ಬಂಟ್ವಾಳ, ಫೆ.24. ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿದೆ. ಉಳಿ ಗ್ರಾಮದ ಪುಲ್ಲೇರಿ ನಿವಾಸಿ ಸತೀಶ್ ಪೂಜಾರಿ(35) ಎಂಬಾತ ಜೀವಾವಧಿ ಶಿಕ್ಷೆಗೆ ಒಳಗಾದ ವ್ಯಕ್ತಿ.
ಪರಿಶಿಷ್ಟ ಪಂಗಡಕ್ಕೆ ಸೇರಿದ ಅಪ್ರಾಪ್ತ ಬಾಲಕಿಗೆ ಸತೀಶ್ ಪೂಜಾರಿ ಲೈಂಗಿಕ ದೌರ್ಜನ್ಯ ಎಸಗಿದ ಬಗ್ಗೆ ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.