(ನ್ಯೂಸ್ ಕಡಬ)newskadaba.com ಮಂಗಳೂರು, ಫ.24. ಚಳಿಗಾಲದ ದಿನಗಳು ಮುಗಿದು, ಬೇಸಗೆಯ ಬಿಸಿ ಹೆಚ್ಚಾಗುತ್ತಿದೆ. ಮುಂದಿನ ದಿನಗಳಲ್ಲಿ ಗರಿಷ್ಠ ಉಷ್ಣಾಂಶದಲ್ಲಿ ಮತ್ತಷ್ಟು ಏರಿಕೆ ಕಂಡು ಬರಲಿದೆ. ಪರಿಣಾಮ ಮಳೆಯೂ ಸುರಿಯಲಿದ್ದು, ಮಾರ್ಚ್ ಮಧ್ಯಭಾಗದಿಂದ ಬೇಸಗೆ ಮಳೆ ಸುರಿಯುವ ಎಲ್ಲ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಅಭಿಪ್ರಾಯಪಟ್ಟಿದೆ.
ಮಳೆಗಾಲ ಅಲ್ಲದಿದ್ದರೂ ವಾಡಿಕೆ ಪ್ರಕಾರ ಫೆಬ್ರವರಿಯಲ್ಲಿ ರಾಜ್ಯದಲ್ಲಿ 7 ಮಿ.ಮೀ. ವರೆಗೆ ಮಳೆ ಸರಿಯಬೇಕು. ಅದರೆ ಈ ಬಾರಿ ಇಲ್ಲಿಯ ವರೆಗೆ ಅಷ್ಟು ಮಳೆಯಾಗಿಲ್ಲ. ಫೆಬ್ರವರಿ ಅಂತ್ಯ ಅಥವಾ ಮಾರ್ಚ್ ಮೊದಲ ವಾರದಿಂದ ಬಿಸಿಲಿನ ಪ್ರಭಾವ ಮತ್ತಷ್ಟು ಹೆಚ್ಚಾಗಲಿದೆ.