(ನ್ಯೂಸ್ ಕಡಬ)newskadaba.com ಹೈದರಾಬಾದ್, ಫೆ.24. ಬೋಯಿನಪಲ್ಲಿಯ ಆಸಿಫ್‌ನಗರ ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್ ವಿಶಾಲ್ ಜಿಮ್ ನಲ್ಲಿ ವ್ಯಾಯಾಮ ಮಾಡುವಾಗ ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ವಿಶಾಲ್ ಜಿಮ್ ನಲ್ಲಿ ಬಹಳ ಹೊತ್ತು ಪುಷ್-ಅಪ್ಸ್ ಮಾಡಿದ್ದಾರೆ.ಇದರಿಂದಾಗಿ ಇದ್ದಕ್ಕಿದ್ದಂತೆ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.