ಮತೀಯ ಗಲಭೆಗೆ ಕುಮ್ಮಕ್ಕು ಆರೋಪ ► ದಕ್ಷಿಣ ಕನ್ನಡ ಜಿಲ್ಲೆಯಿಂದ ಇಬ್ಬರ ಗಡೀಪಾರಿಗೆ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.30. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪದೇ ಪದೇ ಮತೀಯ ಗಲಭೆಗಳಿಗೆ ಕಾರಣವಾಗುತ್ತಿರುವ ಆರೋಪದಲ್ಲಿ ಇಬ್ಬರನ್ನು ಆರು ತಿಂಗಳ ಕಾಲ ಜಿಲ್ಲೆಯಿಂದ ಗಡಿಪಾರು ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.

ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ರೌಡಿ ಪಟ್ಟಿಯಲ್ಲಿರುವ ಕಲ್ಲಡ್ಕ ನಿವಾಸಿಗಳಾದ ರತ್ನಾಕರ ಶೆಟ್ಟಿ ಮತ್ತು ಖಲೀಲ್ ಎಂಬವರು ಜೂನ್ ತಿಂಗಳಲ್ಲಿ ಪರಸ್ಪರ ಹಲ್ಲೆ ಮಾಡಿಕೊಂಡು ಮತೀಯ ಗಲಭೆಗೆ ಕಾರಣರಾಗಿದ್ದರು. ಈ ಹಿನ್ನೆಲೆಯಲ್ಲಿ ಇಬ್ಬರನ್ನೂ ಗಡಿಪಾರು ಮಾಡಿ ಆದೇಶ ಹೊರಡಿಸುವಂತೆ ಎರಡು ತಿಂಗಳ ಹಿಂದೆ ಅರ್ಜಿ ಸಲ್ಲಿಸಲಾಗಿತ್ತು. ಹಲವು ಬಾರಿ ವಿಚಾರಣೆ ನಡೆಸಿದ ಜಿಲ್ಲಾಧಿಕಾರಿಯವರು ಇಬ್ಬರನ್ನೂ ಆರು ತಿಂಗಳ ಕಾಲ ಜಿಲ್ಲೆಯಿಂದ ಗಡಿಪಾರು ಮಾಡುವಂತೆ ಶುಕ್ರವಾರ ಆದೇಶ ಹೊರಡಿಸಿದ್ದಾರೆ ಎಂದು ದಕ್ಷಿಣ ಕನ್ನಡ ಎಸ್ಪಿ ಸಿ.ಎಚ್.ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

Also Read  ರಜೆ ನೀಡಿದ ಜಿಲ್ಲಾಧಿಕಾರಿಗೆ ಮಕ್ಕಳಿಂದ ಅಭಿನಂದನೆ - ವಿಡಿಯೋ ವೈರಲ್

error: Content is protected !!
Scroll to Top