ಆರೋಗ್ಯ ಸಿಬ್ಬಂದಿ ನಿರ್ಲಕ್ಷದಿಂದ ನವಜಾತ ಶಿಶು ಮೃತ್ಯು..! ➤ ಕುಟುಂಬಸ್ಥರ ಅಕ್ರೋಶ

(ನ್ಯೂಸ್ ಕಡಬ) newskadaba.com. ಕಲಬುರಗಿ. ಫೆ.23.  ಕಲಬುರಗಿ ಹೆರಿಗೆ ಸಮಯದಲ್ಲಿ ಆರೋಗ್ಯ ಸಿಬ್ಬಂದಿ  ನಿರ್ಲಕ್ಷದಿಂದ ನವಜಾತ ಶಿಶುವೊಂದು ಮೃತಪಟ್ಟ ಘಟನೆ ನಡೆದಿದೆ. ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರು ಸಂಬಂಧಿಕರು ಹಾಗೂ ಸಾರ್ವಜನಿಕರು ಪ್ರತಿಭಟನೆ ನಡೆಸುತ್ತಿದ್ದಾರೆ.

ಗರ್ಭಿಣಿ ಅಫ್ಸಾನಾ ಬೇಗಂ ಕುತಬೋದ್ದೀನ್ ನಿರ್ಣಾ ಬೆಳಿಗ್ಗೆ 10.30ಕ್ಕೆ ಹೆರಿಗೆ ನೋವು ಕಾಣಿಸಿಕೊಂಡ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು.  ಆ ಸಮಯದಲ್ಲಿ ಆಂಬುಲೆನ್ಸ್ ಸಹ ಇಲ್ಲದ ಕಾರಣ ಖಾಸಗಿ ವಾಹನದ ಮೂಲಕ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಹೆರಿಗೆ ಸಮಯದಲ್ಲಿ ಮಗು ಮೃತಪಟ್ಟಿದ್ದು, ಪ್ರಕರಣವನ್ನು ಮುಚ್ಚಿ ಹಾಕಲು ನಮ್ಮನ್ನು ಯಾಮಾರಿಸುತ್ತಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸುತ್ತಿದ್ದಾರೆ.

Also Read  ಕಡಬ: ಒಂದು ವಾರದ ಹಿಂದೆ ಚಿಂತಾಜನಕ ಸ್ಥಿತಿಯಲ್ಲಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

error: Content is protected !!
Scroll to Top