ಕಡಬ: ಮುಂದುವರಿದ ಕಾಡಾನೆ ಪತ್ತೆ ಕಾರ್ಯಾಚರಣೆ !

 (ನ್ಯೂಸ್ ಕಡಬ)newskadaba.com ಕಡಬ, ಫೆ.25. ಕಡಬ ತಾಲೂಕಿನಲ್ಲಿ ಕಾಡಾನೆ ಪತ್ತೆ ಕಾರ್ಯಾಚರಣೆ ಶನಿವಾರವೂ ಮುಂದುವರಿದಿದೆ. ನಿನ್ನೆಯೂ ಕಾರ್ಯಾಚರಣೆ ನಡೆದಿದ್ದು, ಸಾಕಾನೆಗಳಿಗೆ ವಿರಾಮ ನೀಡಲಾಗಿತ್ತು.


ಕಡಬ ತಾಲೂಕಿನ ರೆಂಜಿಲಾಡಿಯಲ್ಲಿ ಯುವತಿ ಸಹಿತ ಇಬ್ಬರು ಕಾಡಾನೆ ದಾಳಿಗೆ ಬಲಿಯಾದ ಬೆನ್ನಲ್ಲೇ ಸ್ಥಳೀಯರ ಆಗ್ರಹದ ಮೇರೆಗೆ ಕಳೆದ ಮಂಗಳವಾರದಿಂದ ಕಾಡಾನೆ ಸೆರೆ ಕಾರ್ಯಾಚರಣೆ ಆರಂಭವಾಗಿದ್ದು, ಗುರುವಾರ ಒಂಟಿ ಸಲಗವನ್ನು ಸೆರೆ ಹಿಡಿದು ನಾಗರಹೊಳೆ ಮತ್ತಿಗೋಡು ಸಾಕಾನೆ ಶಿಬಿರಕ್ಕೆ ಕೊಂಡೊಯ್ಯಲಾಗಿದೆ. ಆದರೆ ತಾಲೂಕಿನಲ್ಲಿ ಇನ್ನೂ ಕೆಲವು ಕಾಡಾನೆಗಳು ಇರುವ ಸುಳಿವು ದೊರೆತ ಹಿನ್ನೆಲೆಯಲ್ಲಿ ಅವುಗಳನ್ನು ಸೆರೆ ಹಿಡಿಯುವ ಸಲುವಾಗಿ ಕಾಡಾನೆ ಸೆರೆ ಕಾರ್ಯಾಚರಣೆಯನ್ನು ಮುಂದುವರಿಸಲಾಗಿದೆ.

Also Read  ಕಡಬ: ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

error: Content is protected !!
Scroll to Top