(ನ್ಯೂಸ್ ಕಡಬ)newskadaba.com ಭಟ್ಕಳ, ಫೆ.25. ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸುವ ಘಟನೆ ಭಟ್ಕಳದಿಂದ ವರದಿಯಾಗಿದೆ. ಆಸ್ತಿಗಾಗಿ ಒಂದೇ ಮನೆಯ ನಾಲ್ವರ ಕೊಲೆ ನಡೆದಿದೆ.
ಭಟ್ಕಳ ತಾಲೂಕಿನ ಹಾಡುವಳ್ಳಿಯಲ್ಲಿ ಶಂಭು ಭಟ್ (65), ಅವರ ಪತ್ನಿ ಮಾದೇವಿ ಭಟ್ (40), ಪುತ್ರ ರಾಜೀವ್ ಭಟ್ (34) ಹಾಗೂ ಸೊಸೆ ಕುಸುಮಾ ಭಟ್ (30) ಮೃತಪಟ್ಟವರು. ಮನೆಯ ಹೊರಗಡೆ ನಾಲ್ವರ ಶವ ಚೆಲ್ಲಾಪಿಲ್ಲಿಯಾಗಿ ಕಂಡು ಬಂದಿದೆ. ನಾಲ್ವರನ್ನು ಅಟ್ಟಾಡಿಸಿ ಕತ್ತಿಯಿಂದ ಕಡಿದು ಕೊಲೆ ಮಾಡಲಾಗಿದೆ.