ಕಾಸರಗೋಡು: ರಿವಾಲ್ವರ್ ತೋರಿಸಿ ಲಾರಿ ಕಿಡ್ನಾಪ್‌ !

(ನ್ಯೂಸ್ ಕಡಬ)newskadaba.com ಕಾಸರಗೋಡು, ಫೆ.25. ಕೆಂಪು ಕಲ್ಲು ಸಾಗಿಸುತ್ತಿದ್ದ ಲಾರಿ ಚಾಲಕರಿಗೆ ರಿವಾಲ್ವರ್ ತೋರಿಸಿ ಎರಡು ಲಾರಿಗಳನ್ನು ಅಪಹರಿಸಿದ ಘಟನೆ ಕರ್ನಾಟಕ ಕೇರಳ ಗಡಿಯ ಮೀಯ ಪದವಿನಲ್ಲಿ ನಡೆದಿದ್ದು, ಪ್ರಕರಣವನ್ನು ಕೆಲವೇ ಗಂಟೆಗಳಲ್ಲಿ ಮಂಜೇಶ್ವರ ಪೊಲೀಸರು ಬೇಧಿಸಿ ನಾಲ್ವರನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಮಹಾರಾಷ್ಟ್ರ ನಾಸಿಕ್ ನ ರಾಕೇಶ್ ಕಿಶೋರ್ (25), ಸೋಂಕಾಲಿನ ಹೈದರ್ ಅಲಿ (22), ಪೈವಳಿಕೆ ಕಳಾಯಿಯ ಸಯಾಫ್ (22), ಮೀಯಪದವು ಮುಹಮ್ಮದ್ ಸಫ್ವಾನ್ (23) ಬಂಧಿತರು. ಈ ವೇಳೆ ಮತ್ತಿಬ್ಬರು ಪರಾರಿಯಾಗಿದ್ದು, ಅವರಿಗಾಗಿ ಶೋಧ ಆರಂಭವಾಗಿದೆ. ಬಂಧಿತರಿಂದ ಅಪಹರಣಗೊಂಡ ಎರಡು ಲಾರಿ, ಪಿಸ್ತೂಲ್, ನಾಲ್ಕು ಸಜೀವ ಗುಂಡುಗಳು, ಕಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Also Read  ಮತ್ತೇ ಭುಗಿಲೆದ್ದ ಹಿಂಸಾಚಾರ..! ➤ 40 ಕ್ಕೂ ಹೆಚ್ಚು ಉಗ್ರರ ಹತ್ಯೆ

 

error: Content is protected !!
Scroll to Top