ರೋಹಿಣಿ, ರೂಪಾ ವಿರುದ್ಧ ತನಿಖೆಗೆ ಆದೇಶಿಸಿದ ರಾಜ್ಯ ಸರ್ಕಾರ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.25. ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಡಿ. ರೂಪಾ ಮೌದ್ಗಿಲ್​ ವಿರುದ್ಧ ತನಿಖೆ ನಡೆಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ಮೇರೆಗೆ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ಇಬ್ಬರು ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ ಹೊರಡಿಸಿದ್ದಾರೆ.

ರೋಹಿಣಿ ವಿರುದ್ಧ ಐಪಿಎಸ್​ ಡಿ.ರೂಪಾ ಬಹಿರಂಗ ಹೇಳಿಕೆ. ಸಾಮಾಜಿಕ‌ ಜಾಲತಾಣದಲ್ಲಿ ರೋಹಿಣಿ ಸಿಂಧೂರಿ ಫೋಟೋ ಪ್ರಕಟಣೆ. ಸರ್ಕಾರಕ್ಕೆ ಮುಜುಗರ ಉಂಟು ಮಾಡಿರುವುದು. ರೋಹಿಣಿಯಿಂದ ಪಾರಂಪರಿಕ ಕಟ್ಟಡ ನಿಯಮಾವಳಿ ಉಲ್ಲಂಘನೆ ಹಾಗೂ ಬ್ಯಾಗ್ ಖರೀದಿ ಪ್ರಕರಣ, ಸಿವಿಲ್‌ ಸೇವಾ ನಿಯಮಾವಳಿ ಉಲ್ಲಂಘನೆ ಮಾಡಿರುವ ಬಗ್ಗೆಯೂ ಇಬ್ಬರ ವಿರುದ್ದ ಇಲಾಖೆ ತನಿಖಾ ವ್ಯಾಪ್ತಿಗೆ ವಹಿಸಿ ಆದೇಶಿಸಿದ್ದಾರೆ.

 

Scroll to Top