ಕಲಾಸಿಪಾಳ್ಯ ನೂತನ ಬಸ್ ನಿಲ್ದಾಣ ಉದ್ಘಾಟಿಸಿದ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.25. ರಾಜಧಾನಿ ಬೆಂಗಳೂರಿನ ಕಲಾಸಿಪಾಳ್ಯದಲ್ಲಿ ನಿರ್ಮಿಸಿರುವ  ನೂತನ ಬಸ್ ನಿಲ್ದಾಣವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು.

ಸಾರ್ವಜನಿಕರ ಅನುಕೂಲಕ್ಕಾಗಿ ಬಿಎಂಟಿಸಿ  ಸುಮಾರು 63.17 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಈ ಸುಸಜ್ಜಿತ ನಿಲ್ದಾಣವನ್ನು ಮುಖ್ಯಮಂತ್ರಿ ಸಾರ್ವಜನಿಕರ ಸೇವೆಗೆ ಸಮರ್ಪಿಸಿದರು. ಸಚಿವರಾದ ಆರ್. ಅಶೋಕ್, ಮುನಿರತ್ನ, ಬೈರತಿ ಬಸವರಾಜ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

Scroll to Top