ಸಿಇಟಿ ಪ್ರವೇಶ ಪರೀಕ್ಷೆ ವೇಳಾಪಟ್ಟಿ ಪ್ರಕಟ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.25. ಎಂಜಿನಿಯರಿಂಗ್‌ ಸಹಿತ ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ ನಡೆಸಲಾಗುವ ಪ್ರಸಕ್ತ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ವೇಳಾಪಟ್ಟಿ ಶುಕ್ರವಾರ ಪ್ರಕಟಗೊಂಡಿದ್ದು, ಮೇ 20 ಮತ್ತು 22ರ ವರೆಗೆ ನಡೆಯಲಿವೆ.


ಮಾರ್ಚ್‌ 1ರಿಂದ ಈ ಸಂಬಂಧದ ನೋಂದಣಿ ಪ್ರಕ್ರಿಯೆ ಆರಂಭಗೊಳ್ಳಲಿದ್ದು, 20 ಮತ್ತು 21ರಂದು ಎಂಜಿನಿಯರಿಂಗ್‌, ಕೃಷಿ ವಿಜ್ಞಾನ, ಪಶುವೈದ್ಯಕೀಯ, ಆಯುಷ್‌, ಯೋಗ, ಯುನಾನಿ ಮತ್ತಿತರ ಕೋರ್ಸ್‌ ಗಳ ಪ್ರವೇಶಕ್ಕೆ ಪರೀಕ್ಷೆ ನಡೆಯಲಿವೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

Also Read  ವಿಧಾನಸಭೆ ಚುನಾವಣೆ ಹಿನ್ನೆಲೆ➤ಮತದಾನ ಮಾಡದಿದ್ದರೆ ವೇತನ ಕಡಿತ..!

error: Content is protected !!
Scroll to Top