(ನ್ಯೂಸ್ ಕಡಬ)newskadaba.com ಕಲಬುರಗಿ, ಫೆ.25. ಮದ್ಯ ಕುಡಿಯಲು ಹಣ ನೀಡಲಿಲ್ಲ ಎಂಬ ಕಾರಣದಿಂದ ಪತ್ನಿಯನ್ನು ಪತಿ ಮಚ್ಚಿನಿಂದ ಹೊಡೆದು ಕೊಲೆ ಮಾಡಿದ ದಾರುಣ ಘಟನೆ ಕಾಳಗಿ ತಾಲೂಕಿನ ತೆಂಗಳಿ ಗ್ರಾಮದಲ್ಲಿ ನಡೆದಿದೆ.
ಈರಮ್ಮ ಶಿವಯ್ಯ ಮಠಪತಿ ( 37) ಕೊಲೆಯಾದ ಮಹಿಳೆ. ಆಕೆಯ ಪತಿ ಶಿವಯ್ಯ ಮಠಪತಿಯನ್ನು ಬಂಧಿಸಿರುವ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
