➤ ರಾಜಕೀಯ ನಿವೃತ್ತಿ ಸುಳಿವು ನೀಡಿದ ಸೋನಿಯಾ

(ನ್ಯೂಸ್ ಕಡಬ) newskadaba.com. ದೆಹಲಿ. ಫೆ.25.  ಭಾರತ್ ಜೋಡೊ ಯಾತ್ರೆಯೊಂದಿಗೆ ನನ್ನ ಇನ್ನಿಂಗ್ಸ್ ಮುಕ್ತಾಯವಾಗಬಹುದು ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ರಾಜಕೀಯ ನಿವೃತ್ತಿ ಹೊಂದುವ ಸುಳಿವು ನೀಡಿದ್ದಾರೆ.

ಛತ್ತೀಸ್ ಗಢದ ರಾಜಧಾನಿ ರಾಯ್ ಪುರದಲ್ಲಿ ಪಕ್ಷದ ಸಮಾವೇಶದಲ್ಲಿ ಮಾತನಾಡಿದ ಅವರು ನನಗೆ ಅತ್ಯಂತ ಸಂತೋಷಕರ ಸಂಗತಿಯೆಂದರೆ ನನ್ನ ಇನ್ನಿಂಗ್ಸ್ ಭಾರತ್ ಜೋಡೊ ಯಾತ್ರೆಯೊಂದಿಗೆ ಮುಕ್ತಾಯವಾಗಬಹುದು. ಇದು ಪಕ್ಷಕ್ಕೆ ತಿರುವು ನೀಡಲಿದೆ ಎಂದಿದ್ದಾರೆ.

Scroll to Top