ರಾಜ್ಯಮಟ್ಟದ ಅಥ್ಲೆಟಿಕ್ ಸ್ಪರ್ಧೆ ➤ ಕಡಬ ಸರಕಾರಿ ಪ್ರೌಢಶಾಲೆಯ ಚರಿಶ್ಮಾ ರಾಷ್ಟ್ರಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಫೆ. 27. ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಫೆ. 20ರಂದು ನಡೆದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರೌಢಶಾಲಾ ವಿದ್ಯಾರ್ಥಿಗಳ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ 17 ರ ವಯೋಮಾನದ ಬಾಲಕಿಯರ ವಿಭಾಗದ1500 ಮೀ. ಓಟದ ಸ್ಪರ್ಧೆಯಲ್ಲಿ ಕಡಬ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಚರಿಶ್ಮಾ ದ್ವಿತೀಯ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಆಯ್ಕೆಯಾಗಿರುತ್ತಾಳೆ.

ಇವರಿಗೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಲೋಕೇಶ್ ತಂಟೆಪ್ಪಾಡಿ ಅವರು ತರಬೇತಿಯನ್ನು ನೀಡಿರುತ್ತಾರೆ. ಇವರು ಮರ್ಧಾಳ ಗ್ರಾಮದ ಬಸವಪಾಲು ಸುಬ್ರಾಯ ಗೌಡ ಮತ್ತು ಸುಮತಿ ದಂಪತಿಗಳ ಪುತ್ರಿ.

Also Read  ಬಿಬಿಎಂಪಿ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ - ಅಧಿಕಾರಿ ನಾಪತ್ತೆ - ದಾಖಲೆ ಪರಿಶೀಲನೆ

error: Content is protected !!
Scroll to Top