ಗಾಂಜಾ ಮತ್ತಿನಲ್ಲಿ ತಂಡದಿಂದ ತಲವಾರು ದಾಳಿ ➤ ಓರ್ವನಿಗೆ ಗಾಯ

(ನ್ಯೂಸ್ ಕಡಬ) newskadaba.com ಸುರತ್ಕಲ್, ಫೆ. 27. ಮೊಗವೀರ ಮಹಾಸಭಾ ವ್ಯಾಪ್ತಿಯ ಸಮುದ್ರ ತೀರದಲ್ಲಿ ಇಬ್ಬರ ತಂಡವೊಂದು ರಿಕ್ಷಾ ಚಾಲಕ ಸೇರಿ ಗ್ರಾಮಸ್ಥರಿಗೆ ತಲವಾರು ಝಳಪಿಸಿ ಹಲ್ಲೆ ನಡೆಸಿ, ಬೆದರಿಕೆ ಹಾಕಿದ ಘಟನೆ ಸುರತ್ಕಲ್ ನ ಚಿತ್ರಾಪುರ ಸಮೀಪದ ಪಣಂಬೂರು ಎಂಬಲ್ಲಿ ನಡೆದಿದೆ.

 

ಗಾಯಗೊಂಡ ರಿಕ್ಷಾ ಚಾಲಕನನ್ನು ಸುನಿಲ್ ಎಂದು ಗುರುತಿಸಲಾಗಿದೆ. ಅಲ್ಲದೇ ರಿಕ್ಷಾವನ್ನು ಪುಡಿಗೈಯಲಾಗಿದೆ. ಹಲ್ಲೆ ನಡೆಸಿದ ಆರೋಪಿಯನ್ನು ಸ್ಥಳೀಯರ ಸಹಕಾರದಿಂದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಇನ್ನೋರ್ವ ಆರೋಪಿ ಸ್ಥಳದಿಂದ ಪರಾರಿಯಾಗಿದ್ದು ಆತನಿಗಾಗಿ ಶೋಧ ನಡೆಸಲಾಗುತ್ತಿದೆ. ಕಡಲ್ಕೊರೆತ ತಡೆಗೆ ಹಾಕಲಾಗಿದ್ದ ಕಲ್ಲುಗಳಲ್ಲಿ ಕಳೆದ ಹಲವು ತಿಂಗಳಿನಿಂದ ಮಾದಕ ವ್ಯಸನಿಗಳು ಅನೈತಿಕ ಚಟುವಟಿಕೆ ನಡೆಸುತ್ತಿದ್ದು, ಈ ಕುರಿತು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದರು ಎಂದು ತಿಳಿದು ಬಂದಿದೆ. ಇದೇ ದ್ವೇಷದಿಂದ ಈ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಸುರತ್ಕಲ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  ಪುತ್ತೂರು: ಅಂಗಡಿಯೊಂದರ ಮುಂದೆ ಅವಿವಾಹಿತ ಆತ್ಮಹತ್ಯೆ..!

error: Content is protected !!