ದೆಹಲಿ ಅತಿಕ್ರಮಣ ವಿರೋಧಿ ಅಭಿಯಾನ ➤ ಮಸೀದಿ ಮತ್ತು ದೇವಸ್ಥಾನಗಳ ನೆಲಸಮ

(ನ್ಯೂಸ್ ಕಡಬ) newskadaba.com. ನವದೆಹಲಿ .ಫೆ.27.  ದೆಹಲಿ ಸರ್ಕಾರದ ಲೋಕೋಪಯೋಗಿ ಇಲಾಖೆಯು  ಅತಿಕ್ರಮಣ ವಿರೋಧಿ ಅಭಿಯಾನದ ಭಾಗವಾಗಿ ಮಧ್ಯ ದೆಹಲಿಯ ಕಾಲುದಾರಿಯಲ್ಲಿದ್ದ ಮಸೀದಿ ಮತ್ತು ದೇವಾಲಯ ಸೇರಿದಂತೆ ಧಾರ್ಮಿಕ ಕಟ್ಟಡಗಳನ್ನು ನೆಲಸಮಗೊಳಿಸಿದೆ.

ಪಾದಚಾರಿ ಮಾರ್ಗದಲ್ಲಿ ಧಾರ್ಮಿಕ ಕಟ್ಟಡಗಳನ್ನು ನಿರ್ಮಿಸಲಾಗಿದೆ ಮತ್ತು ಅವುಗಳನ್ನು ಕೆಡವಲು ನ್ಯಾಯಾಲಯ ಆದೇಶಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿರುವ ಬಗ್ಗೆ ಪಿಟಿಐ ವರದಿ ಮಾಡಿದೆ. ಲೋಕೋಪಯೋಗಿ ಇಲಾಖೆ ಅಧಿಕಾರಿಯೊಬ್ಬರು ಮಾತನಾಡಿ, ಪಾದಚಾರಿ ಮಾರ್ಗದಲ್ಲಿ ನಿರ್ಮಿಸಿರುವ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸಲು ಚಾಲನೆ ನೀಡಲಾಗುತ್ತಿದೆ, ಈ ಕುರಿತು ನ್ಯಾಯಾಲಯದ ಆದೇಶವಿದೆ ಎಂದರು.

ದೆಹಲಿ-ಉತ್ತರ ಪ್ರದೇಶ ಗಡಿಯ ದೆಹಲಿ ಭಾಗದಲ್ಲಿ ಇರುವ 23 ಧಾರ್ಮಿಕ ಕಟ್ಟಡಗಳ ಪೈಕಿ 9 ಅನಧಿಕೃತ ಕಟ್ಟಡವನ್ನು ತೆರವುಗೊಳಿಸುವ ಪ್ರಕ್ರಿಯೆಗೆ ದೆಹಲಿಯ ಲೆಫ್ಟಿನೆಂಟ್‌ ಗವರ್ನರ್‌ ವಿಕೆ ಸಕ್ಸೇನಾ ಅನುಮೋದನೆ ನೀಡಿದ್ದು, ಇದೀಗ ಕಾರ್ಯಾಚರಣೆ ಮುಂದುವರಿದಿದೆ.

error: Content is protected !!

Join the Group

Join WhatsApp Group