(ನ್ಯೂಸ್ ಕಡಬ) newskadaba.com.ಬೆಂಗಳೂರು. ಫೆ.27. 2023ರ ಮಹಿಳಾ ಟಿ20 ವಿಶ್ವಕಪ್ಗೆ ಅದ್ಧೂರಿ ತೆರೆಬಿದ್ದಿದೆ. ಕಳೆದ ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾ ತಂಡ ಮತ್ತೊಮ್ಮೆ ಚಾಂಪಿಯನ್ ಆಗುವ ಮೂಲಕ ಟಿ20 ಚಾಂಪಿಯನ್ ಪಟ್ಟವನ್ನು ತನ್ನಲ್ಲೇ ಉಳಿಸಿಕೊಂಡಿದೆ.
ಫೈನಲ್ನಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 16 ರನ್ಗಳಿಂದ ಮಣಿಸಿದ ಆಸೀಸ್ ವನಿತಾ ತಂಡ 6ನೇ ಬಾರಿಗೆ ಟ್ರೋಫಿ ಎತ್ತಿಹಿಡಿಯಿತು. ಈ ಮೂಲಕ ಟೂರ್ನಿಗೂ ತೆರೆ ಬಿದ್ದಿತ್ತು. ಇದೀಗ ಐಸಿಸಿ ಅತ್ಯುತ್ತಮ ಟಿ20 ವಿಶ್ವಕಪ್ ತಂಡವನ್ನು ಪ್ರಕಟಿಸಿದ್ದು, ಈ ತಂಡದಲ್ಲಿ ಟೀಂ ಇಂಡಿಯಾದ ಓರ್ವ ಆಟಗಾರ್ತಿ ಮಾತ್ರ ಸ್ಥಾನ ಪಡೆದಿದ್ದಾರೆ. ಇಡೀ ಪಂದ್ಯಾವಳಿಯಲ್ಲಿ ಒಟ್ಟು 136 ರನ್ ಗಳಿಸಿದ ಭಾರತದ ಸ್ಫೋಟಕ ಬ್ಯಾಟರ್ ಹಾಗೂ ವಿಕೆಟ್ ಕೀಪರ್ ರೀಚಾ ಘೋಷ್ ಐಸಿಸಿ ಟಿ20 ತಂಡದಲ್ಲಿ ಸ್ಥಾನ ಪಡೆದ ಏಕೈಕ ಭಾರತೀಯ ಆಟಗಾರ್ತಿ ಎನಿಸಿಕೊಂಡಿದ್ದಾರೆ. ಇನ್ನುಳಿದಂತೆ ಐಸಿಸಿಯ ಪ್ಲೇಯಿಂಗ್ ಇಲೆವೆನ್ನಲ್ಲಿ ಹಾಲಿ ಚಾಂಪಿಯನ್ ಆಸ್ಟ್ರೇಲಿಯನ್ ತಂಡದ 4 ಆಟಗಾರ್ತಿಯರಿದ್ದರೆ, ರನ್ನರ್ ಅಪ್ ದಕ್ಷಿಣ ಆಫ್ರಿಕಾ ತಂಡದಿಂದ 3 ಆಟಗಾರ್ತಿಯರು ಸ್ಥಾನ ಪಡೆದಿದ್ದಾರೆ.