➤ ಮದುವೆ ಸಮಾರಂಭದಲ್ಲಿ ಡ್ಯಾನ್ಸ್ ಮಾಡುತ್ತಿರುವಾಗ ಕುಸಿದು ಬಿದ್ದು ಯುವಕ ಮೃತ್ಯು..

(ನ್ಯೂಸ್ ಕಡಬ) newskadaba.com. ತೆಲಂಗಾಣ .  ಫೆ.28. ಮದುವೆ ಸಮಾರಂಭದಲ್ಲಿ ನೃತ್ಯ ಮಾಡುತ್ತಿರುವಾಗ ಕುಸಿದುಬಿದ್ದು, 19 ವರ್ಷದ ಯುವಕನೋರ್ವ ಮೃತಪಟ್ಟಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಯುವಕ ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯವನೆಂದು ತಿಳಿದುಬಂದಿದೆ. ತನ್ನ ಸಂಬಂಧಿಕರ ಮದುವೆಯಲ್ಲಿ ನೃತ್ಯ ಮಾಡುತ್ತಿದ್ದಾಗ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಹೈದರಾಬಾದ್​ನಿಂದ 200 ಕಿ.ಮೀ ದೂರದಲ್ಲಿರುವ ನಿರ್ಮಲ್ ಜಿಲ್ಲೆಯ ಪಾರ್ಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಕೂಡ ವೈರಲ್ ಆಗಿದೆ. ಸಂಬಂಧಿಕರ ಮದುವೆಯಲ್ಲಿ ಪಾಲ್ಗೊಳ್ಳಲು ತೆರಳಿದ್ದ ಯುವಕ ಡಿಜೆಯಲ್ಲಿ ಹಾಡಿ ಕುಣಿಯುತ್ತಿದ್ದ. ಈ ಘಟನೆಯಿಂದ ಕುಟುಂಬಸ್ಥರು ಹಾಗೂ ಸಂಬಂಧಿಕರಲ್ಲಿ ಶೋಕ ಮಡುಗಟ್ಟಿತ್ತು.

error: Content is protected !!
Scroll to Top